ಡಾ.ಹೆಚ್.ಸಿ.ಮಹದೇವಪ್ಪ ಅವರಿಂದ ಬಿ-ಖಾತಾ ಅಭಿಯಾನಕ್ಕೆ ಚಾಲನೆ.

ಮೈಸೂರು : ಮಾ.1 (ಕರ್ನಾಟಕ ವಾರ್ತೆ) ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು, ಜಿಲ್ಲೆಯ ನಗರ ಪಾಲಿಕೆ ಹಾಗೂ ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತ್ತಿದ್ದ ಅರ್ಹ ಫಲಾನುಭವಿಗಳಿಗೆ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಶನಿವಾರ ನಗರ ಪಾಲಿಕೆಯ ಸಭಾಂಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರವು ಈ ಐತಿಹಾಸಿಕ ತೀರ್ಮಾನವನ್ನು ಕೈಗೊಂಡಿದ್ದು, ಅನೇಕ ವರ್ಷಗಳ ಕಾಲ ಯಾವುದೇ ದಾಖಲೆಗಳಿಲ್ಲದೆ ನಿವೇಶನಗಳಲ್ಲಿ ವಾಸಿಸುತ್ತಿದ್ದ ಜನರ ಅನುಕೂಲಕ್ಕಾಗಿ ಬಿ-ಖಾತಾ ಅಭಿಯಾನ ಪ್ರಾರಂಭಿಸಿದೆ ಎಂದು ತಿಳಿಸಿದರು.

ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಂಡು ಯಾವುದೇ ಲೋಪವಾಗದಂತೆ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದರಿಂದ ಸ್ಥಳೀಯ ಸಂಸ್ಥೆಗಳಿಗೂ ಆದಾಯ ದೊರಕಲಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧೀಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಮುಂತಾದವರು ಉಪಸ್ಥಿತಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!