
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್ಶಿಪ್ ಟೆಸ್ಟ್ ಟೂರ್ನಿಯಲ್ಲಿ ಜೋಫ್ರಾ ಆರ್ಚರ್ ಸಸೆಕ್ಸ್ ತಂಡದ ಪರ ಕಣಕ್ಕಿಳಿದಿದ್ದಾರೆ. ಚೆಸ್ಟರ್-ಲೆ-ಸ್ಟ್ರೀಟ್ನ ರಿವರ್ಸೈಡ್ ಮೈದಾನದಲ್ಲಿ ನಡೆದ ಡರ್ಹ್ಯಾಮ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಆರ್ಚರ್ ಮೊದಲ ಇನಿಂಗ್ಸ್ನಲ್ಲಿ 18 ಓವರ್ಗಳನ್ನು ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಕೇವಲ 32 ರನ್ ನೀಡಿ ಒಂದು ವಿಕೆಟ್ ಪಡೆದಿದ್ದಾರೆ. ಈ ಮೂಲಕ ಜೋಫ್ರಾ ಆರ್ಚರ್ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದ್ದಾರೆ.ಇತ್ತ ಕೌಂಟಿ ಕ್ರಿಕೆಟ್ನಲ್ಲಿ ಆರ್ಚರ್ 18 ಓವರ್ಗಳನ್ನು ಎಸೆಯುಲು ಯಶಸ್ವಿಯಾಗಿರುವ ಕಾರಣ ಅವರನ್ನು ಭಾರತದ ವಿರುದ್ಧದ ಸರಣಿಗೆ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಮರಳುವ ಸಲುವಾಗಿಯೇ ಆರ್ಚರ್ ಮತ್ತೆ ರೆಡ್ ಬಾಲ್ ಕ್ರಿಕೆಟ್ನಲ್ಲಿ ಕಣಕ್ಕಿಳಿದಿದ್ದಾರೆ. ಅದರಲ್ಲೂ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯ ಮುಗಿದರೂ ಇನ್ನೂ 4 ಮ್ಯಾಚ್ಗಳು ಬಾಕಿಯಿವೆ. ಹೀಗಾಗಿ ಈ ಸರಣಿಯ ಮೂಲಕವೇ ಕಂಬ್ಯಾಕ್ ಮಾಡಲು ಜೋಫ್ರಾ ಆರ್ಚರ್ ಪ್ಲ್ಯಾನ್ ರೂಪಿಸಿದ್ದಾರೆ. ಅದರಂತೆ ಭಾರತದ ವಿರುದ್ಧದ ಎರಡನೇ ಅಥವಾ ಮೂರನೇ ಟೆಸ್ಟ್ ಪಂದ್ಯದ ವೇಳೆ ಜೋಫ್ರಾ ಆರ್ಚರ್ ಇಂಗ್ಲೆಂಡ್ ಟೆಸ್ಟ್ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ಎಡ್ಜ್ಬಾಸ್ಟನ್ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಜೋಫ್ರಾ ಆರ್ಚರ್ ಇಂಗ್ಲೆಂಡ್ ತಂಡವನ್ನು ಸೇರಿಕೊಂಡರೆ ಆಂಗ್ಲರ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ. ಅದರಲ್ಲೂ ಮಾರಕ ಬೌನ್ಸರ್ಗೆ ಹೆಸರುವಾಸಿಯಾಗಿರುವ ಆರ್ಚರ್ ಎದುರಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ಜೋಫ್ರಾ ಎಂಟ್ರಿಗೂ ಮುನ್ನ ಟೀಮ್ ಇಂಡಿಯಾ ಬ್ಯಾಟರ್ಗಳು ಘಾತಕ ಎಸೆತಗಳನ್ನು ಎದುರಿಸಲು ಸಜ್ಜಾಬೇಕಿರುವುದು ಅನಿವಾರ್ಯ.





