ದಲಿತ ಬಾಲಕಿಯ ಮೇಲೆ *ಗಿಕ ದೌರ್ಜನ್ಯ : 59 ಮಂದಿ ಆರೋಪಿಗಳ – ಪೈಕಿ 57 ಮಂದಿ ಬಂಧನ!

ಪತ್ತನಂತಿಟ್ಟ: ಕೇರಳದ ಪತ್ತಂತಿಟ್ಟ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 59 ಮಂದಿ ಆರೋಪಿಗಳ – ಪೈಕಿ 57 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ – ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಜನವರಿ 10 ರಂದು ಇಳವುಂತಿಟ್ಟ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾ ದಾಗಿನಿಂದ ಇಲ್ಲಿಯವರೆಗೂ ವಿದೇಶದಲ್ಲಿರುವ ಇಬ್ಬರನ್ನು ಹೊರತುಪಡಿಸಿ ಪಟ್ಟಿಯಲ್ಲಿರುವ ಎಲ್ಲಾ ಆರೋಪಿಗಳನ್ನು ಸಮಗ್ರ ತನಿಖೆಯ ಮೂಲಕ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿ.ಜಿ. ವಿನೋದ್ ಕುಮಾ‌ರ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೊನೆಯ ಆರೋಪಿ 25 ವರ್ಷದ ಯುವಕನನ್ನು ಭಾನುವಾರ ಬೆಳಿಗ್ಗೆ ಅವರ ಮನೆಯ ಸಮೀಪದಲ್ಲಿಯೇ ಬಂಧಿಸಲಾಗಿದೆ. ಮಹಿಳಾ ಐಪಿಎಸ್ ಅಧಿಕಾರಿ ಎಸ್ ಅಜಿತಾ ಬೇಗಂ ನೇತೃತ್ವದ ವಿಶೇಷ ತನಿಖಾ ತಂಡವು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿದೆ.
ಆರೋಪಿಗಳ ಹೇಳಿಕೆ ಆಧರಿಸಿ ಜಿಲ್ಲೆಯ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 30 ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳಲ್ಲಿ ಐವರು ಅಪ್ರಾಪ್ತರು ಕೂಡ ಇದ್ದಾರೆ. ತನಿಖೆ ಪೂರ್ಣ ಗೊಳಿಸಿ ಆದಷ್ಟು ಬೇಗ ದೋಷಾರೋಪ ಪಟ್ಟಿ ಸಲ್ಲಿಸುವುದು ಪೊಲೀಸ್ ತಂಡದ ಉದ್ದೇಶವಾಗಿದೆ ಎಂದು ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪತ್ತನಂತಿಟ್ಟದ ಖಾಸಗಿ ಬಸ್ ನಿಲ್ದಾಣದಲ್ಲಿ ಹಲವು ಆರೋಪಿಗಳು ಬಾಲಕಿಯನ್ನು ಭೇಟಿಯಾ ಗಿದ್ದು, ನಂತರ ಆಕೆಯನ್ನು ವಾಹನಗಳಲ್ಲಿ ವಿವಿಧ ಸ್ಥಳಗಳಿಗೆ ಕರೆದೊಯ್ದು ದೌರ್ಜನ್ಯವೆಸಗಿರುವುದು ಇವರೆಗಿನ ತನಿಖೆಯಿಂದ ತಿಳಿದುಬಂದಿದೆ.
ಕಳೆದ ವರ್ಷ ಹನ್ನೆರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಯುವಕನೊಬ್ಬ ರಾಗ್ನಿಯ ರಬ್ಬರ್ ತೋಟಕ್ಕೆ ಕರೆದೊಯ್ದು ಇತರ ಮೂವರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ತನಿಖೆಯಿಂದ ತಿಳಿದುಬಂದಿದೆ.
2024 ರ ಜನವರಿಯಲ್ಲಿ ಕಾರಿನೊಳಗೆ ಮತ್ತು ಪಥನಂತಿಟ್ಟ ಜನರಲ್ ಆಸ್ಪತ್ರೆಯಲ್ಲಿ ನಡೆದ ಘಟನೆಗಳು ಸೇರಿದಂತೆ ಐದು ಸಂದರ್ಭಗಳಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಈಗ 18 ವರ್ಷ ತುಂಬಿರುವ ಯುವತಿ 13 ವರ್ಷದಿಂದ 62 ವ್ಯಕ್ತಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಆಕೆಯ ನಡವಳಿಕೆಯಲ್ಲಿ ಗಮನಾರ್ಹ ಬದಲಾವಣೆಗಳ ಸಮಿತಿಗೆ ತಿಳಿಸಿದೆ. ನಂತರ ಸಮಿತಿಯು ಪೊಲೀಸರೆಯೂಚನೆ ನೀಡಿದ್ದು, ತನಿಖೆ ನಡೆಯುತ್ತಿದೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!