‘ನಟಿ ಸೌಂದರ್ಯಾ ಸಾವು ಆಕಸ್ಮಿಕವಲ್ಲ; 21 ವರ್ಷಗಳ ಬಳಿಕ ದಾಖಲಾಯ್ತು ದೂರು.

ನಟಿ ಸೌಂದರ್ಯಾ ಅವರು 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಅವರು ಏರಿದ್ದ ಖಾಸಗಿ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಅವರ ಜೊತೆ ಸಹೋದರ ಅಮರನಾಥ್ ಕೂಡ ನಿಧನ ಹೊಂದಿದರು. ಈ ಘಟನೆ ನಡೆದು 21 ವರ್ಷಗಳು ಕಳೆದಿವೆ. ಈಗ ಟಾಲಿವುಡ್ನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಇವರ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ.


ಕೌಟುಂಬಿಕ ಸಮಸ್ಯೆ ಕಾರಣದಿಂದ ಮೋನ್ ಬಾಬು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈಗ ಅವರು ಸೌಂದರ್ಯಾ ಸಾವಿನ ಪ್ರಕರಣದಲ್ಲಿ ಸಮಸ್ಯೆ ಎದುರಿಸಿದ್ದಾರೆ. ಆಂಧ್ರ ಪ್ರದೇಶದ ಖಮ್ಮಾಮ್ ಜಿಲ್ಲೆಯಲ್ಲಿ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಮೋಹನ್ ಬಾಬು ಕೈವಾಡ ಇದೆ ಎಂದು ದೂರಲಾಗಿದೆ. ಚಿಟ್ಟಿಮಲ್ಲು ಎಂಬುವವರು ಈ ದೂರು ನೀಡಿದ್ದಾರೆ.‘ಸೌಂದರ್ಯಾ ಅವರದ್ದು ಆಕಸ್ಮಿಕ ಸಾವಲ್ಲ, ಇದೊಂದು ನಿಯೋಜಿತ ಕೊಲೆ. ಜಾಗದ ವಿಚಾರದಲ್ಲಿ ಈ ಕೊಲೆ ನಡೆದಿದೆ. ಸೌಂದರ್ಯಾ ಹಾಗೂ ಅವರ ಸಹೋದರ ಅಮರನಾಥ್ ಶಂಶಾಬಾದ್ನಲ್ಲಿರುವ ಆರು ಎಕರೆ ಜಾಗವನ್ನು ಹೊಂದಿದ್ದರು. ಇದನ್ನು ತಮಗೆ ಕೊಡುವಂತೆ ಮೋಹನ್ ಬಾಬು ಕೇಳುತ್ತಿದ್ದರು. ಇದನ್ನು ಮಾರಲು ಸೌಂದರ್ಯಾ ನಿರಾಕರಿಸಿದ್ದರು. ಇದರಿಂದ ಈ ಕೊಲೆ ನಡೆದಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಸೌಂದರ್ಯಾ ಅವರು ಕನ್ನಡ ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ‘ಆಪ್ತಮಿತ್ರ’ ಚಿತ್ರದಲ್ಲಿ ಮಾಡಿದ ನಾಗವಲ್ಲಿ ಪಾತ್ರ ಯಾವಾಗಲೂ ನೆನಪಿನಲ್ಲಿ ಇರುವಂಥದ್ದು. ಅವರು ನಿಧನ ಹೊಂದುವಾಗ ಕೇವಲ 31 ವರ್ಷ ವಯಸ್ಸಾಗಿತ್ತು.


ಸೌಂದರ್ಯಾ ಅವರ ಸಾವಿನ ಬಳಿಕ ಈ ಜಾಗ ಮಾರುವಂತೆ ಅವರ ಕುಟುಂಬದವರಿಗೆ ಮೋಹನ್ ಬಾಬು ಒತ್ತಡ ಹೇರಿದ್ದಾರೆ ಎಂದು ದೂರನಲ್ಲಿ ತಿಳಿಸಲಾಗಿದೆ. ಆ ಬಳಿಕ ಮೋಹನ್ ಬಾಬು ಅವರು ಅಕ್ರಮವಾಗಿ ಈ ಜಾಗವನ್ನು ಪಡೆದುಕೊಂಡರು ಎನ್ನಲಾಗಿದೆ. ಸದ್ಯ ದೂರು ನೀಡಿದ ಚಿಟ್ಟಿಮಲ್ಲು ತಮಗೆ ಪೊಲೀಸ್ ರಕ್ಷಣೆ ಬೇಕು ಎಂದು ಕೋರಿದ್ದಾರೆ. ಅಲ್ಲದೆ ಈ ಜಾಗವನ್ನು ಸರ್ಕಾರದವರು ವಶಕ್ಕೆ ಪಡೆದು ಅಗತ್ಯ ಇರುವ ವೃದ್ಧಾಶ್ರಮದವರಿಗೆ ನೀಡುವಂತೆ ಕೋರಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!