ನನ್ನ ರಾಜೀನಾಮೆ ಪ್ರಶ್ನೆಯೇ ಇಲ್ಲ: ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು…

ಬೆಂಗಳೂರು: ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ಸಚಿನ್ ಪಂಚಾಳ್ (Sachin Panchal) ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ (CID) ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಅವರಿಗೆ ಸಿಬಿಐ (CBI) ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಸಿಬಿಐ ತನಿಖೆಗೆ ಕೇಳುತ್ತಾರೆ. ವರ್ಷಗಳ ಹಿಂದೆ ಬಿಜೆಪಿ ಕೈಯಲ್ಲಿ ಎಲ್ಲಾ ಸಂಸ್ಥೆಗಳು ಇತ್ತು ಏನ್ ಮಾಡಿದರು? ಬಿಜೆಪಿ ಯಾರದ್ದೋ ತಲೆ ದಂಡ ಆಗುತ್ತೆ ಅಂತ ಕಾಯ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಯಾರ ತಲೆ ತಂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.

ಕಲಬುರಗಿಗೆ (Kalaburagi) ಮುತ್ತಿಗೆ ಹಾಕೋ ಎಚ್ಚರಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಚಿವರು,ಕಲಬುರಗಿಗೆ ಮುತ್ತಿಗೆ ಹಾಕಲಿ ಯಾರು ಬೇಡ ಎಂದಿದ್ದಾರೆ. ನನ್ನ ವಿರುದ್ದ ಏನಾದರೂ ದಾಖಲಾತಿ ಇದ್ದರೆ ತಂದು ಕೊಡಿ. ನಿಮಗೆ ನಾಚಿಕೆ ಆಗಬೇಕು. ಯಾಕೆ ಕಲಬುರಗಿಗೆ ಮುತ್ತಿಗೆ ಹಾಕ್ತಾರೆ ಎಂದು ಪ್ರಶ್ನಿಸಿದರು.
ಬಿಜೆಪಿ ನಾಯಕರನ್ನು ಮಾಧ್ಯಮಗಳು ಯಾಕೆ ಅಷ್ಟು ಸಿರಿಯಸ್ ಆಗಿ ತೆಗೆದುಕೊಂಡಿದ್ದೀರಿ? ಹೈಕಮಾಂಡ್ ನಾಯಕರೇ ರಾಜ್ಯ ಬಿಜೆಪಿ ನಾಯಕರನ್ನ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಯಡಿಯೂರಪ್ಪ ಫೋಕ್ಸೋ ಪ್ರಕರಣಕ್ಕೆ ನೋಟಿಸ್ ಕೊಟ್ರಾ? ಮುನಿರತ್ನ ಕೇಸ್ ನಲ್ಲಿ ಹೈಕಮಾಂಡ್ ನಾಯಕರು ಏನ್ ಕ್ರಮ ತೆಗೆದುಕೊಂಡಿದ್ದಾರೆ? ಯತ್ನಾಳ್ ವಿರುದ್ದ ಏನ್ ಕ್ರಮ ಆಯ್ತು? ರೇಣುಕಾಚಾರ್ಯ ವಿರುದ್ದ ಏನ್ ಕ್ರಮ ಆಗಿದೆ. ರಾಜ್ಯದ ನಾಯಕರಿಗೆ ಹೈಕಮಾಂಡ್ ಕವಡೆ ಕಾಸಿನ ಕಿಮ್ಮತ್ತು ಕೊಡುವುದಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರನ್ನು ಲೇವಡಿ ಮಾಡಿದರು.

ರಾಜು ಕಪನೂರು ಪ್ರಿಯಾಂಕ್ ಖರ್ಗೆ ಜೊತೆ ಇದ್ದ ಫೋಟೋ ರಿಲೀಸ್ ಮಾಡಿದ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಚಿವರು, ರಾಜು ಕಪನೂರು ಬಿಜೆಪಿ ನಾಯಕರ ಜೊತೆ ಇದ್ದ ಫೋಟೋ ಬಿಡುಗಡೆ ಮಾಡಿದರು. ರಾಜು ಕಪನೂರು ಬಿಜೆಪಿಯಲ್ಲಿ ಮೊದಲು ಇದ್ದರು. ಫೋಟೋ ಹಲವಾರು ಇವೆ. ಆದರೆ ಸತ್ಯ ಏನು? ರಾಜು ಕಪನೂರು ಪರಿಚಯ ಇಲ್ಲ ಅಂತ ನಾವು ಹೇಳಿಲ್ಲ. ನಟಿಯರ ಡ್ರಗ್ ಕೇಸ್ ನಲ್ಲಿ ನಟಿ ವಿಪಕ್ಷ ನಾಯಕ ಅಶೋಕ್ ಜೊತೆ ನಟಿಯರ ಫೋಟೋ ಇತ್ತು. ಹಾಗಾದ್ರೆ ಅದಕ್ಕೆ ಅಶೋಕ್ ಸಂಬಂಧ ಹೇಳೋಕೆ ಆಗುತ್ತಾ? ಫೋಕ್ಸೋ ಕೇಸ್ನಲ್ಲಿ ಯಡಿಯೂರಪ್ಪ ಯಾಕೆ ರಾಜೀನಾಮೆ ಕೊಟ್ಟಿಲ್ಲ? ಅಕ್ರಮ ಹಣ ದುರ್ಬಳಕೆ ಪ್ರಕರಣದಲ್ಲಿ ವಿಜಯೇಂದ್ರ ಯಾಕೆ ರಾಜೀನಾಮೆ ಕೊಟ್ಟಿಲ್ಲ. ಮೊದಲು ನಿಮ್ಮ ನಾಯಕರಿಗೆ ನೋಟಿಸ್ ಕೊಡಿ ಅಂತ ಕಿಡಿಕಾರಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!