ಪಂಜಾಬ್ ಕಿಂಗ್ಸ್ ತಂಡದ ಬೌಲಿಂಗ್ ಗೆ ತತ್ತರಿಸಿದ ಕೆ.ಕೆ.ಆರ್ ….

ಲೋಯೆಸ್ಟ್ ಸ್ಕೋರ್ ಅನ್ನು ಡಿಪೆಂಡ್ ಮಾಡುವ ಮುಖಾಂತರ ಐಪಿಎಲ್ ನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ರಣರೋಚಕ ಪಂದ್ಯ ಒಂದಕ್ಕೆ ಸಾಕ್ಷಿಯಾಗಿದೆ. ಇಂತಹದೊಂದು ಮ್ಯಾಚ್ ನಡೆದಿರುವುದು ಕ್ರೀಡಾಭಿಮಾನಿಗಳಿಗೆ ಆಶ್ಚರ್ಯವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ನ 31ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಪ್ರಾರಂಭದಲ್ಲಿ ಉತ್ತಮ ಪ್ರದರ್ಶನ ಕಂಡರಾದರು ಕೆಕೆಆರ್ ನ ಬೌಲಿಂಗ್ ಡಿಪಾರ್ಟ್ಮೆಂಟ್ ವಿಕೆಟ್ ಪಾತನಗೊಳಿಸುವಲ್ಲಿ ಯಶಸ್ವಿಯಾಯಿತು. ಪಂಜಾಬ್ ಕಿಂಗ್ಸ್ ನ ನಾಯಕ ಶ್ರೇಯಸ್ ಅಯ್ಯರ್ ಕೂಡ ಸೊನ್ನೆಗೆ ಹೌಟ್ ಆಗಿ ಹೋದರು. ನಂತರ ಬಂದ ಬ್ಯಾಟ್ಸ್ಮನ್ ಗಳಿಂದಲೂ ಏನು ಮಾಡಲು ಸಾಧ್ಯವಾಗಲಿಲ್ಲ. ಇನ್ನು ಕ್ರಿಕೆಟ್ ಇತಿಹಾಸದಲ್ಲಿ ಬಿಗ್ ಶೋ ಎಂದು ಹೆಸರು ಪಡೆದಿರುವ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಕೂಡ ಅಧಿಕ ರನ್ ಗಳಿಸಲು ಸಾಧ್ಯವಾಗಲಿಲ್ಲ.

ಒಟ್ಟಾರೆಯಾಗಿ ತಂಡವು 15.3 ಓವರ್ ಗಳಲ್ಲಿ ಕೇವಲ 111 ರನ್ ಗಳಿಸಿ ಆಲ್ ಔಟ್ ಆದರು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ವೇಗವಾಗಿ ಪಂದ್ಯವನ್ನ ಮುಗಿಸಿ ರನ್ ರೇಟ್ ಉತ್ತಮಗೊಳಿಸುವಲ್ಲಿ ಮುಂದಾಗಲು ಯತ್ನಿಸಿದರು. ಡಿಪೆಂಡಿಂಗ್ ಚಾಂಪಿಯನ್ಸ್ ಗೆ ಇದು ಸುಲಭದ ತುತ್ತು ಎನಿಸಿತ್ತಾರಾದರೂ, ಕ್ರೀಡಾಂಗಣದಲ್ಲಿ ನಡೆದ ಇತಿಹಾಸವೇ ಬೇರೆಯಾಗಿತ್ತು.

ಪ್ರಾರಂಭದಲ್ಲಿ ಕ್ವಿಂಟನ್ ಡಿಕಾಕ್ ವಿಕೆಟ್ ಅನ್ನು ಮಾರ್ಕೊ ಜಾನ್ಸಸ್ ಉರುಳಿಸಿ ಒಂದೇ ಒಂದು ಜೀವಂತವಾಗಿರಿಸಿಕೊಂಡಿದ್ದರು. ನಂತರದಲ್ಲಿ ಬಂದ ಕೆಕೆಆರ್ ತಂಡದ ನಾಯಕ ಅಜೀಂಕೆ ರಹಾನೆ ಹಾಗೂ ರಘುವಂಶಿ 50 ರನ್ ಗಳ ಪಾರ್ಟ್ನರ್ಶಿಪ್ ಕಲೆ ಹಾಕಿದರಾದರು. ನಂತರದಲ್ಲಿ ಬೌಲಿಂಗ್ ಗೆ ಬಂದಂತಹ ಸ್ಪಿನ್ನರ್ ಯುಜುವೇಂದ್ರ ಚಹಲ್ ಆಟದ ದಿಕ್ಕನ್ನೇ ಬದಲಿಸಿದರು ಅದು ಸಹ ನಾಲ್ಕು ವಿಕೆಟ್ಗಳನ್ನು ಪಡೆಯುವುದರ ಮುಖಾಂತರ ಎಂಬುದ ವಿಶೇಷವಾಗಿದೆ.

ಇದರೊಂದಿಗೆ ರಣ ಉತ್ಸಾಹಕ್ಕೆ ಮಾರ್ಪಟ್ಟ ಪಂಜಾಬ್ ಕಿಂಗ್ಸ್ ಆಟಗಾರರು ಕೆಕೆಆರ್ ಬ್ಯಾಟರ್ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಅದ್ಭುತ ಫೀಲ್ಡಿಂಗ್ ಸೆಟ್ ಮಾಡುವ ಮೂಲಕ ಸತತ ವಿಕೆಟ್ ಪಡೆದರು. ಪರಿಣಾಮ 15.1ಓವರ್ ಗಳಲ್ಲಿ ಕೆಕೆಆರ್ ತಂಡವು 95 ರನ್ ಗಳಿಸಲಷ್ಟೇ ಶಕ್ತರಾದರು.

ಈ ಮುಖಾಂತರ ಕೆಕೆಆರ್ ತಂಡವನ್ನು ಆಲ್ ಔಟ್ ಮಾಡಿ ಪಂದ್ಯವನ್ನು ತನ್ನದಾಗಿಸಿಕೊಂಡಿತು ಪಂಜಾಬ್ ಕಿಂಗ್ಸ್ ಪಡೆ. ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತಿ ಕಡಿಮೆ ಸ್ಕೋರ್ ಗಳಿಸಿ ಜಯ ಸಾಧಿಸಿದ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!