ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ

ಬೆಳಗಾವಿ ಸುವರ್ಣಸೌಧ,ಡಿ.12 : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್