ಫುಡ್ ಪಾಯಿಸನ್ ಊಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥ ಓರ್ವ ಸಾ* ; ಅನಾಥಾಶ್ರಮದಲ್ಲಿ ಘಟನೆ.

ಮಂಡ್ಯ, ಮಾರ್ಚ್ 16:- ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ ಆಗಿದೆ. ವಿಷ ಪ್ರಾಶನದ ಪರಿಣಾಮ 6ನೇ ತರಗತಿಯ ವಿದ್ಯಾರ್ಥಿ ಕೆರ್ಲಾಂಗ್ (13) ಸಾವನ್ನಪ್ಪಿದ್ದು, 29 ಮಕ್ಕಳು ಅಸ್ವಸ್ಥರಾಗಿದ್ದಾರೆ. ಉದ್ಯಮಿಯೊಬ್ಬರು ಶುಕ್ರವಾರ ಹೋಳಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಊಟ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭ ಉಳಿದ ಊಟವನ್ನು ಟಿ.ಕಾಗೇಪುರ ಗ್ರಾಮದ ಬಳಿ ಇರುವ ಅನಾಥಾಶ್ರಮಕ್ಕೆ ನೀಡಲಾಗಿತ್ತು. ಅನಾಥಾಶ್ರಮದ ಮಕ್ಕಳು ಈ ಊಟ ಸೇವಿಸಿದ ಬಳಿಕ ಅವರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಈ ಅನಾಹುತದ ಬಳಿಕ ಹೋಳಿ ಹಬ್ಬದ ಸಂದರ್ಭದಲ್ಲಿ ಊಟ ಸೇವಿಸಿದ್ದ ಕೆಲವು ಸಾರ್ವಜನಿಕರೂ ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಇದರಿಂದಾಗಿ ಊಟದಲ್ಲಿ ವಿಷಾಂಶ ಇತ್ತೇ ಎಂಬುದರ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಫುಡ್ ಪಾಯ್ಸನಿಂಗ್ ಕುರಿತು ಪ್ರಕರಣ ದಾಖಲಿಸಲಾಗಿದೆ. ಘಟನೆಯ ಪೂರ್ಣ ಮಾಹಿತಿ ಸಂಗ್ರಹಿಸಲು ಆರೋಗ್ಯ ಇಲಾಖೆ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ್ದಕ್ಕೆ ಮಳವಳ್ಳಿಯಲ್ಲಿ ಡಿಎಚ್​​ಒ ಡಾ.ಮೋಹನ್ ಪ್ರತಿಕ್ರಿಯಿಸಿದ್ದು, ಮಾರ್ವಾಡಿಗಳು ಹೋಳಿ ಹಬ್ಬ ಪ್ರಯುಕ್ತ ಶುಕ್ರವಾರ ರಾತ್ರಿ ಊಟ ಮಾಡಿಸಿದ್ದರು. ಗೋಕುಲಂ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೂ ಅದೇ ಊಟ ವಿತರಿಸಲಾಗಿದೆ‌. ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಶುರುವಾಗಿದೆ. ವೈದ್ಯರು ಚಿಕಿತ್ಸೆ ನೀಡಿ ಬಂದಿದ್ದರು. ಚೆನ್ನಾಗಿ ಓಡಾಡಿಕೊಂಡಿದ್ದ ವಿದ್ಯಾರ್ಥಿಯೊಬ್ಬ ದಿಢೀರಾಗಿ ಮೃತಪಟ್ಟಿದ್ದಾನೆ. ಪೋಸ್ಟ್ ಮಾರ್ಟಮ್‌‌ನಲ್ಲಿ ಸಾವಿಗೆ ಕಾರಣ ನಿಖರವಾಗಿ ಗೊತ್ತಾಗಲಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳಲ್ಲಿ 27 ಮಂದಿ ಹೊರರಾಜ್ಯದವರಾಗಿದ್ದಾರೆ. ಇಬ್ಬರು ಸ್ಥಳೀಯ ವಿದ್ಯಾರ್ಥಿಗಳಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳು ಸದ್ಯ ಆರೋಗ್ಯವಾಗಿದ್ದಾರೆ. ಹಬ್ಬದ ಊಟ ಮಾಡಿಸಿ, ಸೇವಿಸಿದ್ದ ಮಾರ್ವಾಡಿಗಳಿಗೂ ವಾಂತಿ, ಭೇದಿ ಆಗಿದೆ. ಅವರು ಹಲವೆಡೆ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!