ಬರೋಬ್ಬರಿ 8 ತಿಂಗಳು ಫ್ರಿಡ್ಜ್ನಲ್ಲೇ ಇತ್ತು ಮೃ*ದೇಹ!

ಭೋಪಾಲ್ :- ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನೇ ಹೋಲುವಂತಹ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ವಿವಾಹಿತನೊಬ್ಬ ಲಿವ್ಇನ್ ರಿಲೇಶನ್ ಶಿಪ್ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಬರೋಬ್ಬರಿ 8 ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿ ಸಂಜಯ್ ಪಾಟಿದಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಉಜ್ಜಯಿನಿ ನಿವಾಸಿಯಾಗಿರುವ ಆರೋಪಿ ಸಂಜಯ್ ಪಾಟಿದಾರ್ ಕಳೆದ ಐದು ವರ್ಷಗಳಿಂದ ಪ್ರತಿಭಾ ಯಾನೆ ಪಿಂಕಿ ಪ್ರಜಾಪತಿ ಜೊತೆ ಲಿವ್ಇನ್ ಸಂಬಂಧದಲ್ಲಿದ್ದ. ಆದರೆ ಆಕೆ ತನ್ನನ್ನು ಮದುವೆಯಾಗು ಎಂದು ಒತ್ತಾಯಿಸಲು ಶುರುಮಾಡಿದ್ದಾಳೆ. ಅದಾಗಲೇ ಮದುವೆಯಾಗಿದ್ದ ಸಂಜಯ್ ಪಾಟಿದಾರ್, ಮದುವೆಗೆ ನಿರಾಕರಿಸಿದ್ದ. ಪ್ರತಿಭಾ ಮತ್ತಷ್ಟು ಪೀಡಿಸುತ್ತಿದ್ದಂತೆ ತನ್ನ ಸ್ನೇಹಿತ ವಿನೋದ್ ದವೆಯನ್ನು ಕರೆಸಿಕೊಂಡಿದ್ದ ಸಂಜಯ್, ಪ್ರತಿಭಾಳನ್ನು ಕೊಲೆ ಮಾಡಿ ಮೃತದೇಹವನ್ನ ಫ್ರಿಡ್ಜ್ನಲ್ಲಿಟ್ಟು ಮನೆ ಖಾಲಿ ಮಾಡಿದ್ದ.
ಸಂಜಯ್ ಬಾಡಿಗೆ ಪಡೆದಿದ್ದ ಮನೆಯ ಫ್ರಿಡ್ಜ್ನಲ್ಲಿ ಮೃತದೇಹವನ್ನಿಟ್ಟಿದ್ದ. ಶ್ರೀವಾಸ್ತವ ಎಂಬವರಿಂದ ಮನೆಯನ್ನು ಬಾಡಿಗೆ ಪಡೆದಿದ್ದ ಸಂಜಯ್, ವರ್ಷದ ಹಿಂದೆಯೇ ಮನೆ ಬಿಟ್ಟಿದ್ದ. ಆದಾಗ್ಯೂ ಆಗಾಗ ಬಂದು ಹೋಗುವುದನ್ನು ಮಾಡುತ್ತಿದ್ದ. ಅಲ್ಲದೆ, ಕೆಲವು ವಸ್ತುಗಳನ್ನು ಅಧ್ಯಯನ ಕೊಠಡಿ ಮತ್ತು ಮಾಸ್ಟರ್ ಬೆಡ್ರೂಮ್ನಲ್ಲಿ ಇರಿಸುವುದನ್ನು ಮುಂದುವರೆಸಿದ್ದ. ಹೀಗಾಗಿ ಮನೆ ಮಾಲೀಕರಿಗೂ ಹೆಚ್ಚಿನ ವಿಚಾರ ಗೊತ್ತಿರಲಿಲ್ಲ.
ಇತ್ತೀಚೆಗೆ, ನೆರೆ ಮನೆಯವರು ಅನುಮಾನ ಬಂದು ಮನೆಯ ಬಾಗಿಲು ತೆರೆಯುವಂತೆ ಮಾಲೀಕರನ್ನು ಕೇಳಿದ್ದರು. ಹಾಗೆ ಬಾಗಿಲು ತೆರೆದಾಗ ಪಾಟಿದಾರ್ಗೆ ಸಂಬಂಧಿಸಿದ ವಸ್ತುಗಳು ಒಳಗಿದ್ದ ಕಾರಣ ಮತ್ತೆ ಲಾಕ್ ಮಾಡಿದ್ದರು. ಆದರೆ, ಬುಧವಾರದಿಂಧ ವಿದ್ಯುತ್ ಸರಬರಾಜನ್ನು ಆಫ್ ಮಾಡಿದ್ದರು. ಇದರಿಂದಾಗಿ ಫ್ರಿಡ್ಜ್ನಲ್ಲಿದ್ದ ಮೃತದೇಹದ ವಾಸನೆ ಅಕ್ಕಪಕ್ಕದ ಮನೆಯವರಿಗೆ ಬಂದಿತ್ತು ಎಂದು ಪೊಲೀಸ್ ಅಧಿಕಾರಿ ಅಮಿತ್ ಸೋಲಂಕಿ ಎಂಬವರು ತಿಳಿಸಿದ್ದಾರೆ.
ಸೀರೆಯುಟ್ಟುಕೊಂಡು, ಆಭರಣ ತೊಟ್ಟು, ಅಲಂಕರಿಸಿಕೊಂಡು, ಕುತ್ತಿಗೆಯನ್ನು ತನ್ನ ಕೈಗಳಿಂದ ತಾನೇ ಬಲವಾಗಿ ಬಿಗಿಯಾಗಿ ಕಟ್ಟಿಕೊಂಡು ಕುಳಿತಿರುವ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿತ್ತು. ಫ್ರಿಡ್ಜ್ ತೆರೆದವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಭಯಾನಕ ಸತ್ಯ ಬಯಲಾಗಿದೆ.
ಯುವತಿಯನ್ನು 2024ರ ಜೂನ್ನಲ್ಲೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಂಜಯ್ ಪಡೆದಿದ್ದ ಬಾಡಿಗೆ ಮನೆಯಿಂದ ದುರ್ವಾಸನೆ ಬರಲು ಆರಂಭಿಸಿದ್ದರಿಂದ ನೆರೆಮನೆಯವರು ಮನೆಯ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಮನೆ ಮಾಲೀಕ ಬಂದು ನೋಡಿದಾಗ ಮಹಿಳೆಯ ಮೃತದೇಹ ಫ್ರಿಡ್ಜ್ನಲ್ಲಿರುವುದು ಗೊತ್ತಾಗಿದೆ ಎಂದು ದೇವಾಸ್ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ಮಾಹಿತಿ ನೀಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!