ಮದುವೆ ದಿನ ಮಾತ್ರ ಸ್ನಾನ ಮಾಡುವ ಪದ್ಧತಿಯನ್ನು ಹೊಂದಿದ್ದಾರೆ ಈ ಬುಡಕಟ್ಟು ಜನಾಂಗದವರು …..

ಪ್ರತಿದಿನ ಸ್ನಾನ ಮಾಡುವ ಅಭ್ಯಾಸ ಎಲ್ಲರಿಗೂ ಇರುತ್ತದೆ. ಕೆಲವರು ದಿನಕ್ಕೆ ಎರಡೆರಡು ಬಾರಿ ಸ್ನಾನ ಮಾಡ್ತಾರೆ. ಆದರೆ ಈ ಜನರು ಮಾತ್ರ ಸ್ನಾನ ಅಂದ್ರೆ ಸಾಕು, ಮಾರು ದೂರ ಓಡ್ತಾರೆರಂತೆ. ಹೌದು, ಇಲ್ಲಿನ ಜನರ ಜೀವನಶೈಲಿ ಮಾತ್ರ ಇವತ್ತಿಗೂ ಬದಲಾಗಿಲ್ಲ. ಇಂದಿಗೂ ತಮ್ಮ ಹಿಂದಿನ ಸಂಪ್ರದಾಯವನ್ನು ಅನುಸರಿಸಿಕೊಂಡು ಬರುವ ಇಲ್ಲಿನ ಮಹಿಳೆಯರು ಜೀವನದಲ್ಲಿ ಒಮ್ಮೆ ಮಾತ್ರ ಸ್ನಾನ ಮಾಡುವುದು. ಹಾಗಾದ್ರೆ ಇಂತಹ ವಿಚಿತ್ರ ಜನರು ಇರುವುದು ಎಲ್ಲಿ? ದೇಹದ ಸ್ವಚ್ಛತೆ ಹೇಗೆ ಮಾಡ್ತಾರೆ? ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ ನೋಡಿ….

ಈ ಬುಡಕಟ್ಟು ಜನಾಂಗದವರು ತಮ್ಮ ಹಿರಿಯರು ಪಾಲಿಸಿಕೊಂಡ ಬಂದ ಸಂಪ್ರದಾಯವನ್ನು ಇವತ್ತಿಗೂ ಕೂಡ ಅನುಸರಿಸಿಕೊಂಡು ಬರುತ್ತಿದ್ದಾರಂತೆ. ಅಂತಹ ಆಚರಣೆಗಳಲ್ಲಿ ಒಂದು ಸ್ನಾನ ಮಾಡದೇ ಇರುವುದು. ಪ್ರಪಂಚದಲ್ಲಿರುವ ಈ ಬುಡಕಟ್ಟು ಜನಾಂಗದಲ್ಲಿ ಮಹಿಳೆಯರು ಸ್ನಾನ ಮಾಡುವುದನ್ನೇ ನಿಷೇಧಿಸಲಾಗಿದೆ, ಹೌದು, ಈ ಬುಡಕಟ್ಟು ಜನಾಂಗದ ಹೆಸರು ಹಿಂಬಾ ಬುಡಕಟ್ಟು. ಆಫ್ರಿಕಾ ನಮೀಬಾ ದೇಶದ ಮರುಭೂಮಿಗಳಲ್ಲಿ ಈ ಬುಡಕಟ್ಟು ಜನಾಂಗದ ಜನರು ನೆಲೆಸಿದ್ದು, ಆಧುನಿಕತೆಯಿಂದ ಸಂಪೂರ್ಣ ದೂರ ಉಳಿದಿದ್ದಾರೆ. ನಮ್ಗೆಲ್ಲರಿಗೂ ಒಂದು ದಿನ ಸ್ನಾನ ಮಾಡದೇ ಇದ್ರೆ ಕಿರಿಕಿರಿ ಅನುಭವ ಆಗ್ತದೆ, ಕೆಲವರ ದೇಹದಿಂದ ಗಬ್ಬು ವಾಸನೆ ಬರಲು ಶುರುವಾಗುತ್ತದೆ, ಆದರೆ ಬುಡಕಟ್ಟು ಜನಾಂಗದ ಮಹಿಳೆಯರು ಬೇಸಿಗೆಯಿರಲಿ, ಚಳಿಗಾಲವಿರಲಿ, ಮಳೆಗಾಲವೇ ಇರಲಿ ಸ್ನಾನ ಮಾಡುವುದೇ ಇಲ್ಲ. ಅಷ್ಟೇ ಅಲ್ಲದೇ, ಈ ಮಹಿಳೆಯರು ಬಟ್ಟೆ ಕೂಡ ಒಗೆಯೋದಿಲ್ಲವಂತೆ. ಆದರೆ ಜೀವಮಾನದಲ್ಲಿ ಒಮ್ಮೆ ಮಾತ್ರ ಸ್ನಾನ ಮಾಡೋದು, ಅದುವೇ ತಮ್ಮ ಮದುವೆ ದಿನವಂತೆ.

ಮದುವೆ ದಿನ ಮಾತ್ರ ಸ್ನಾನ ಮಾಡಿದ್ರು ಕೂಡ ಇಲ್ಲಿನ ಮಹಿಳೆಯರು ಸ್ವಚ್ಛತೆಯ ಕಡೆಗೆ ಹೆಚ್ಚು ಗಮನಹರಿಸ್ತಾರೆ. ದೇಹದ ಸ್ವಚ್ಛತೆಗಾಗಿ ಗಿಡಮೂಲಿಕೆಯನ್ನು ಬಳಸ್ತಾರೆ. ಹೌದು ತಮ್ಮ ಸುತ್ತಮುತ್ತಲಿನಲ್ಲಿ ಸಿಗುವ ವಿಶೇಷ ಗಿಡಮೂಲಿಕೆಗಳನ್ನು ನೀರಿನಲ್ಲಿ ಕುದಿಸುತ್ತಾರೆ. ಅದರ ಹೊಗೆಯನ್ನು ಬಳಸಿ ತಮ್ಮ ದೇಹವನ್ನು ಸ್ವಚ್ಛಗೊಳಿಸಿಕೊಳ್ಳುತ್ತಾರೆ. ಸೂರ್ಯನ ಬೆಳಕಿನಿಂದ ಚರ್ಮವನ್ನು ರಕ್ಷಿಸಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾದ ವಿಶೇಷ ಲೋಷನ್ ಬಳಸುತ್ತಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!