ಮುಖ್ಯಮಂತ್ರಿ ಹಂಚಿಕೆ ಕಿತ್ತಾಟಕ್ಕೆ ತೆರೆ ಎಳೆದ ಸಿಎಂ. ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ ಸಿದ್ದರಾಮಯ್ಯ ಮಾತು!

ಬೆಂಗಳೂರು :- ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ವಿಧಾನ ಮಂಡಲದಲ್ಲಿ ಮಾತಾಡುವಾಗ ಅಧಿಕಾರ ಹಂಚಿಕೆ ಕಿತ್ತಾಟಕ್ಕೆ ಒನ್ಸ್ ಫಾರ್ ಆಲ್ ತೆರೆ ಎಳೆದರು ಅಂತ ಹೇಳಿದರೆ ಪ್ರಾಯಶಃ ಉತ್ಪ್ರೇಕ್ಷೆ ಅನಿಸದು. ಅವರು ಹೇಳಿದ ಮಾತಿನಲ್ಲಿ ದೃಢತೆ ಮತ್ತು ಸ್ಪಷ್ಟತೆಯನ್ನು ಗುರುತಿಸಬಹುದು. ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಮುಂದುವರಿಯುವ ಬಗ್ಗೆ ಉದ್ದೇಶಪೂರ್ವಕವಾಗಿ ಕಾಲೆಳೆಯುತ್ತಾರೆ. 2018 ರಲ್ಲೂ ಅವರು ಮುಖ್ಯಮಂತ್ರಿಯಾಗಿ ತಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದರು, ಅದು ಸುಳ್ಳಾಯಿತು, ಅವರ ಪಕ್ಷ ಅಧಿಕಾರಕ್ಕೂ ಬರಲಿಲ್ಲ ಎಂದು ಹೇಳಿದ ಅಶೋಕ, ಕುಳಿತಿದ್ದ ಸಿದ್ದರಾಮಯ್ಯ ಕಡೆ ತಿರುಗಿ ಐದು ವರ್ಷ ನೀವೇ ಸಿಎಂ ಆಗಿರ್ತೀರಾ? ಅನ್ನುತ್ತಾರೆ.

ಪ್ರಾಯಶಃ ಇಂಥದೊಂದು ಅವಕಾಶಕ್ಕಾಗಿ ಕಾಯುತ್ತಿದ್ದ ಸಿದ್ದರಾಮಯ್ಯ, ಐದು ವರ್ಷ ಅವಧಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ, ಮತ್ತು ಅದಾದ ನಂತರದ ಐದು ವರ್ಷದ ಅವಧಿಗೂ ನಾನೇ ಮುಂದುವರಿಯುತ್ತೇನೆ ಎಂದು ನಿರ್ಭಾವುಕಾರಾಗಿ ಹೇಳುತ್ತಾರೆ. ಅವರ ಮಾತುಗಳಿಗೆ ಬಿಜೆಪಿ ಶಾಸಕರು ಸುಮ್ಮನಾಗಿರಬಹುದು, ಅದರೆ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಮೂಡಿದೆ. ಹೈಕಮಾಂಡ್ ಸಮಕ್ಷಮ ಡಿಕೆ ಶಿವಕುಮಾರ್ ಅವರೊಂದಿಗೆ ಸಿದ್ದರಾಮಯ್ಯ ಏನು ಒಪ್ಪಂದ ಮಾಡಿಕೊಂಡಿದ್ದಾರೆ ಅಂತ ಯಾರಿಗೂ ಗೊತ್ತಿಲ್ಲ.
ಅದರೆ ಶಿವಕುಮಾರ್ ಮತ್ತು ಅವರ ಬೆಂಬಲಿಗರು ಎರಡೂವರೆ ವರ್ಷದ ನಂತರ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲಿದ್ದಾರೆ ಅಂತ ಭಾವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಂದು ಸದನದಲ್ಲಿ ಆಡಿದ ಮಾತು ವಿರೋಧಿ ಕ್ಯಾಂಪಲ್ಲಿ ಗೊಂದಲ ಮತ್ತು ಆತಂಕ ಮೂಡಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!