ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆ; 148 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಇದೇ ಮೊದಲು…….

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ ಆಂಗ್ಲರ ನಾಡಿನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ. ಈ ಮೂಲಕ ಲೀಡ್ಸ್ ಮೈದಾನದಲ್ಲಿ ಸೆಂಚುರಿ ಸಿಡಿಸಿದ ಭಾರತದ ಮೊದಲ ಆರಂಭಿಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ವಿಶೇಷ ವಿಶ್ವ ದಾಖಲೆಗೂ ಕೊರೊಳೊಡ್ಡಿದ್ದಾರೆ. ಟೆಸ್ಟ್ ಕ್ರಿಕೆಟ್ ಶುರುವಾಗಿ ಬರೋಬ್ಬರಿ 148 ವರ್ಷಗಳಾಗಿವೆ. 148 ವರ್ಷಗಳಲ್ಲಿ ಯಾವುದೇ ಬ್ಯಾಟರ್​ನಿಂದ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ನಿರ್ಮಿಸಿದ್ದಾರೆ. ಅದು ಕೂಡ ಕೇವಲ 2 ವರ್ಷಗಳಲ್ಲಿ ಎಂಬುದು ವಿಶೇಷ.

ಲೀಡ್ಸ್​​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ ಶುಭಾರಂಭ ಮಾಡಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 159 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದಾರೆ. ವಿಶೇಷ ಎಂದರೆ ಇದು ಯಶಸ್ವಿ ಜೈಸ್ವಾಲ್ ಅವರ ಚೊಚ್ಚಲ ಇಂಗ್ಲೆಂಡ್ ಟೆಸ್ಟ್ ಸರಣಿ. ಅಂದರೆ ಇಂಗ್ಲೆಂಡ್ ಕಣಕ್ಕಿಳಿದ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿಯೂ ಯುವ ದಾಂಡಿಗ ಯಶಸ್ವಿಯಾಗಿದ್ದಾನೆ.

ಅಂದರೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಯಾವುದೇ ಬ್ಯಾಟರ್ ಮೂರು ಪ್ರಮುಖ ದೇಶಗಳ ವಿರುದ್ಧ ಆಡಿದ ವಿದೇಶಿ ಸರಣಿಯ ಮೊದಲ ಪಂದ್ಯದಲ್ಲಿ ಶತಕ ಬಾರಿಸಿಲ್ಲ. ಆದರೆ ಎರಡು ವರ್ಷಗಳ ಹಿಂದೆ ಟೆಸ್ಟ್ ಕೆರಿಯರ್ ಶುರು ಮಾಡಿದ ಯಶಸ್ವಿ ಜೈಸ್ವಾಲ್ ಅಂತಹದೊಂದು ಸಾಧನೆ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.2023 ರಲ್ಲಿ ಕೆರಿಬಿಯನ್ ದ್ವೀಪದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 171 ರನ್ ಬಾರಿಸಿದ್ದರು. ಇದಾದ ಬಳಿಕ 2024 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ತನ್ನ ಚೊಚ್ಚಲ ಸರಣಿಯ ಮೊದಲ ಪಂದ್ಯದಲ್ಲೇ 161 ರನ್ ಕಲೆಹಾಕಿದ್ದರು. ಇದೀಗ ಇದೇ ಮೊದಲ ಬಾರಿಗೆ ಇಂಗ್ಲೆಂಡ್​ನಲ್ಲಿ ಟೆಸ್ಟ್ ಆಡುತ್ತಿರುವ ಜೈಸ್ವಾಲ್ ಶತಕದೊಂದಿಗೆ ಅಬ್ಬರಿಸಿದ್ದಾರೆ.

ಇದರೊಂದಿಗೆ ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್​ನಲ್ಲಿ ಕಣಕ್ಕಿಳಿದ ಮೊದಲ ಟೆಸ್ಟ್​ನಲ್ಲೇ ಶತಕ ಸಿಡಿಸಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ 148 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ಅಪರೂಪದ ವಿಶ್ವ ದಾಖಲೆಯನ್ನು ನಿರ್ಮಿಸುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾನೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!