ಯೂನಿವರ್ಸಲ್ ಬಾಸ್ ಜೊತೆ ಚಂದನ್ ಶೆಟ್ಟಿ ವಿಡಿಯೋ ಸಾಂಗ್….

ಕನ್ನಡ ಹಾಡಿಗೆ ಎಗ್ಸೈಟ್ ಆದ ವಿಶ್ವಪ್ರಸಿದ್ಧ ಕ್ರಿಕೆಟ್ ಆಟಗಾರ ಕ್ರಿಸ್ ಗೇಲ್
‘ಲೈಫ್ ಈಸ್ ಕೆಸಿನೋ’ಎಂಬ ಈ ಹಾಡು ಕನ್ನಡ ಸಿನಿಮಾ ರಂಗದಲ್ಲಿ ಹೊಸ ಅಧ್ಯಾಯವನ್ನು ತೆರೆಯಲಿದೆ. ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ಬಗ್ಗೆ ಘೋಷಿಸಿದ್ದಾರೆ. ಇದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಚಂದನ್ ಶೆಟ್ಟಿ ಅವರು ಈಗಾಗಲೇ ಹಲವು ಹಿಟ್ ಹಾಡುಗಳನ್ನು ನೀಡಿದ್ದಾರೆ. ಅದರಲ್ಲೂ ಅವರ ಆಲ್ಬಂ ಸಾಂಗ್ಗಳು ತುಂಬಾನೇ ಫೇಮಸ್. ಈಗ ಅವರು ವೆಸ್ಟ್ ಇಂಡೀಸ್, ಆರ್ಸಿಬಿಯ ಮಾಜಿ ಆಟಗಾರ ಕ್ರಿಸ್ ಗೇಲ್ ಜೊತೆ ವಿಡಿಯೋ ಸಾಂಗ್ ಒಂದನ್ನು ಶೂಟ್ ಮಾಡುತ್ತಿದ್ದಾರೆ. ಈ ವಿಷಯವನ್ನು ಸ್ವತಃ ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಚಂದನ್ ಶೆಟ್ಟಿ ಅಭಿಮಾನಿಗಳು ಹಾಗೂ ಕನ್ನಡಿಗರಿಗೆ ಖುಷಿ ಆಗಿದೆ. ಈ ವಿಡಿಯೋ ಸಾಂಗ್ ಯಾವ ರೀತಿಯಲ್ಲಿ ಇರಲಿದೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಚಂದನ್ ಶೆಟ್ಟಿ ಅವರು ಹಲವು ಹಿಟ್ ಹಾಡುಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹಾಡುಗಳಿಗೆ ದೊಡ್ಡ ಅಭಿಮಾನಿ ವರ್ಗ ಇದೆ. ಆದರೆ, ಇತ್ತೀಚೆಗೆ ಅವರು ಹಾಡುಗಳನ್ನು ಮಾಡೋದನ್ನು ಕಡಿಮೆ ಮಾಡಿದ್ದಾರೆ. ಅಷ್ಟಾಗಿ ಸಾಂಗ್ಗಳು ಅವರಿಂದ ಮೂಡಿ ಬಂದಿರಲಿಲ್ಲ. ಬದಲಿಗೆ ನಟನೆಯ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದ್ದರು. ಇದರ ಜೊತೆಗೆ ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏರಿಳಿತ ಉಂಟಾಯಿತು. ಈಗ ಅದೆಲ್ಲವನ್ನೂ ಮರೆತು ಮುಂದೆ ಸಾಗುತ್ತಿದ್ದಾರೆ.ಚಂದನ್ ಶೆಟ್ಟಿ ಅವರು ಸದ್ಯ ವಿದೇಶದಲ್ಲಿ ಇದ್ದಾರೆ. ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೇಟಸ್ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಚಂದನ್ ಶೆಟ್ಟಿ ಜೊತೆ ವಿಡಿಯೋ ಸಾಂಗ್ ಶೂಟ್ ಮಾಡುತ್ತಿರುವುದಾಗಿ ಹೇಳಿದ್ದಾರೆ.

https://www.instagram.com/reel/DNNZBnLv3qD/?utm_source=ig_web_copy_link&igsh=MzRlODBiNWFlZA==

‘ನಾವು ಹಾಡು ಮಾಡುತ್ತಿದ್ದೇವೆ. ಅದರ ಹೆಸರು ಲೈಫ್ ಈಸ್ ಕೆಸಿನೋ. ನಾನು ಎಗ್ಸೈಟ್ ಆಗಿದ್ದೇನೆ. ನಾನು ಈ ಹಾಡಿನ ಫ್ಯಾನ್ ಆಗಿದ್ದೇನೆ’ ಎಂದಿದ್ದಾರೆ ಚಂದನ್ ಶೆಟ್ಟಿ. ಇದಕ್ಕೆ ಕ್ರಿಸ್ ಗೇಲ್ ಕೂಡ ಖುಷಿ ಆಗಿದ್ದು, ಅವರು ಹೆಮ್ಮೆಯಿಂದ ಈ ಬಗ್ಗೆ ಹೇಳಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾಯಿರಿ ಎಂದಿದ್ದಾರೆ.ಕ್ರಿಸ್ ಗೇಲ್ ಅವರಿಗೆ ಬೆಂಗಳೂರಿನ ಬಗ್ಗೆ, ಕನ್ನಡಿಗರ ವಿಶೇಷ ಪ್ರೀತಿ ಇದೆ. ಇದಕ್ಕೆ ಕಾರಣ ಆರ್ಸಿಬಿ. ಅವರು ಹಲವು ವರ್ಷಗಳ ಕಾಲ ಆರ್ಸಿಬಿ ಪರ ಆಡಿದ್ದರು. ಅವರು ಅನೇಕ ಬಾರಿ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಆದರೆ, ಈವರೆಗೆ ಅವರು ಕನ್ನಡದ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಂಡಿರಲಿಲ್ಲ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು