ರಾಜ್ಯಕ್ಕೆ ದ್ವಿತೀಯ ಪಿಯುಸಿಯಲ್ಲಿ ದ್ವಿತೀಯ ಸ್ಥಾನ ಪಡೆದ ಮೈಸೂರಿನ ಹುಡುಗಿ ಎಂ.ಎ. ತೇಜಸ್ವಿನಿ.

ಮೈಸೂರು:- ಇಂದು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಭಾರತ್ ಮಾತ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿರಾಜಪೇಟೆ ತಾಲೂಕಿನ ಮಾಕುಟ್ಟದಲ್ಲಿ ಅರಣ್ಯ ಇಲಾಖೆಯ ಡಿಆರ್ ಎಫ್ ಒ ಸೇವೆ ಸಲ್ಲಿಸುತ್ತಿರುವ ಎಂ.ಎ.ಆನಂದ್ ಮತ್ತು ಸುಜಾತಾ ದಂಪತಿಗಳ ಪುತ್ರಿ ಎಂ.ಎ.ತೇಜಸ್ವಿನಿ ಕಾಮರ್ಸ್ ವಿಭಾಗದಲ್ಲಿ 600 ಅಂಕಗಳಿಗೆ 598 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ತೇಜಸ್ವಿನಿ ಕುಶಾಲನಗರದ ಹಳೆ ಮಾರ್ಕೆಟ್ ಬಳಿ ಇರುವ ಆದಿಶಂಕರಾಚಾರ್ಯ ಬಡಾವಣೆಯ ನಿವಾಸಿಯಾಗಿದ್ದು ಎಲ್ಲಾ ವಿಷಯಗಳಲ್ಲೂ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದರೆ ಇಂಗ್ಲಿಷ್ ಭಾಷಾ ವಿಷಯದಲ್ಲಿ ನೂರು ಅಂಕಗಳಿಗೆ 98 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 598 ಅಂಕಗಳನ್ನು ಗಳಿಸಿದ್ದಾರೆ. ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿಗೆ ಭಾರತ್ ಮಾತಾ ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!