ರಾಷ್ಟ್ರಧ್ವಜದ ರಂಗೋಲಿಯಲ್ಲಿ ಅಶೋಕ ಚಕ್ರದ ಬದಲು ಕರ್ನಾಟಕ ನಕ್ಷೆ : ಫೋಟೋ ವೈರಲ್!

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ರಂಗೋಲಿಯನ್ನು ಬಿಡಿಸುವುದು ಸಾಮಾನ್ಯವಾಗಿದೆ. ಆದ್ರೆ ಇಲ್ಲೊಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬಿಡಿಸಿದ ರಂಗೋಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಹೌದು ಬೆಂಗಳೂರಿನ ಆರ್ವಿಐಟಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಅಲ್ಲಿನ ವಿದ್ಯಾರ್ಥಿಗಳು ತಾವು ಬಿಡಿಸಿದ ರಾಷ್ಟ್ರ ಧ್ವಜದ ರಂಗೋಲಿಯಲ್ಲಿ ಅಶೋಕ ಚಕ್ರದ ಬದಲಿಗೆ ಕರ್ನಾಟಕದ ನಕ್ಷೆಯನ್ನು ಬಿಡಿಸಿದ್ದು, ಈ ಕುರಿತ ಫೋಟೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ರಾಷ್ಟ್ರ ಧ್ವಜದ ರಂಗೋಲಿಯ ಮಧ್ಯಭಾಗದಲ್ಲಿ ಅಶೋಕ ಚಕ್ರದ ಬದಲಿಗೆ ಕರ್ನಾಟಕದ ನಕ್ಷೆ ಬಿಡಿಸಿದ್ದಾರೆ. ಈ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇದು ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದಂತಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಪೋಸ್ಟ್ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದನ್ನು ಫ್ಲ್ಯಾಗ್ ಏರಿಯಾ ಆರ್ಟ್ ಎಂದು ಕರೆಯಲಾಗುತ್ತದೆ. ಇದರಲ್ಲಿ ಧ್ವಜದೊಳಗೆ ಭಾರತದ ಹೆಮ್ಮೆಯ ಸಾಧನೆಗಳ ವಿಷಯಗಳ ಚಿತ್ರವನ್ನು ಸಹ ಬಿಡಿಸಲಾಗುತ್ತದೆ. ಅದೇ ರೀತಿ ವಿದ್ಯಾರ್ಥಿಗಳು ಪ್ರೀತಿಯಿಂದ ಕರ್ನಾಟಕದ ನಕ್ಷೆ ಬಿಡಿಸಿದ್ದಾರೆ, ಇದನ್ನು ದೊಡ್ಡ ವಿಷಯ ಮಾಡುವ ಅಗತ್ಯವೇ ಇಲ್ಲʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಭಾರತ ಮತ್ತು ಕರ್ನಾಟಕದ ಧ್ವಜವನ್ನು ಸಂಯೋಜಿಸಿರುವ ರೀತಿ ಸುಂದರವಾಗಿದೆ. ಇದರಲ್ಲಿ ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ ವಿಷಯ ಏನೂ ಇಲ್ಲ, ದಯವಿಟ್ಟು ದ್ವೇಷ ಹರಡದಿರಿʼ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಹೀಗೆ ಕೆಲವರು ಇದಕ್ಕೆ ಬೆಂಬಲ ನೀಡಿದರೆ, ಇನ್ನೂ ಕೆಲವರು ಇದು ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದಂತಾಗಿದೆ ಎಂದು ಹೇಳಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು