ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ.

ಬೆಂಗಳೂರು, ಮಾ, 3 :- ರಾಜ್ಯದಲ್ಲಿ ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಶುರುವಾಗಲಿದ್ದು, ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ಇಂದು ಬೆಳಗ್ಗೆ 11ಕ್ಕೆ ಉಭಯ ಸದನಗಳ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರಿಗೆ ಬೀಳ್ಕೊಟ್ಟ ಬಳಿಕ ಕಲಾಪ ಆರಂಭವಾಗಲಿದೆ. ಬಳಿಕ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಿದ್ದಾರೆ.
ಕರ್ನಾಟಕ ವಿಧಾನಮಂಡಲದ ಅಧಿವೇಶನ ಸೋಮವಾರದಿಂದ (ಮಾ.3) ಆರಂಭವಾಗಲಿದ್ದು, ಮಾ.21ರ ತನಕ ನಡೆಯಲಿದೆ. ಮಾ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 16ನೇ ಬಜೆಟ್ ಹಾಗೂ ಮುಖ್ಯಮಂತ್ರಿ ಆಗಿ 9ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾ.7ರಂದು ಸಿಎಂ ಸಿದ್ದರಾಮಯ್ಯನವರು ಸಚಿವ ಸಂಪುಟ ಸಭೆ ನಡೆಸಿ ಬಜೆಟ್ಗೆ ಅನುಮೋದನೆ ಪಡೆದುಕೊಂಡ ಬಳಿಕ ವಿಧಾನ ಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.

ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿ ದ್ದಾರೆ. ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯ ಲಿವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ಅವರು ಮೊಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಧಿವೇಶನಕ್ಕೆ ಆಗಮಿಸುವ ಸಲುವಾಗಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪ್ರತ್ಯೇಕ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ಬಜೆಟ್ ದಿನ ಕುಳಿತು ಕೊಂಡೇ ಅವರು ಬಜೆಟ್ ಭಾಷಣ ಓದಲಿದ್ದಾರೆ. ಸಿಎಂ
ಸಿದ್ದರಾಮಯ್ಯನವರು ಮಂಡಿಸುವ ಬಜೆಟ್ ಅನ್ನು ಸರ್ಕಾರದ ವಿಧಾನಸಭೆ ಅಧಿವೇಶನದ ವೆಬ್ ಪೋರ್ಟಲ್ ನಲ್ಲಿ ಲೈವ್ ವೀಕ್ಷಿಸಬಹುದು.
ದೂರದರ್ಶನ (ಡಿಡಿ ನ್ಯೂಸ್) ಹಾಗೂ ಇತರ ಸುದ್ದಿ ವಾಹಿನಿಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ ವೀಕ್ಷಿಸಬಹುದು. ವಿಧಾನಮಂಡಲ ಅಧಿವೇಶನ ಮಾ.3 ರಿಂದ ಆರಂಭವಾಗುತ್ತಿರುವ ಹಿನ್ನೆಲೆ ಯಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಮಾ.4 ರಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಸೋಮವಾರ ರಾಜ್ಯಪಾಲರ ಭಾಷಣದಲ್ಲೇ ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ. ಗ್ಯಾರಂಟಿ ಗಳನ್ನು ವಿರೋಧಿಸಿದವರೇ ಅವು ಗಳನ್ನು ಅನುಸರಿಸಿರುವ ಬಗ್ಗೆ ರಾಜ್ಯಪಾಲ ರಿಂದ ಹೇಳಿಸುವ ಮೂಲಕ ಪರೋಕ್ಷ ವಾಗಿ ಬಿಜೆಪಿಗೆ ತಿರುಗೇಟು ನೀಡಲು ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ ರಾಜ್ಯ ಪಾಲರ ಭಾಷಣದ ನಂತರ ಕೆಲಕಾಲ ಮುಂದೂಡಿದ ತರುವಾಯ ಸದನ ಮತ್ತೆ ಆರಂಭವಾಗಲಿದೆ. ಸಂತಾಪ ಸೂಚನೆ ನಿರ್ಣಯ ಮಂಡಿಸಿ ಸಭೆ ಮುಂದೂಡಲಾಗುವುದು. ಮಂಗಳವಾರ, ಬುಧವಾರ ಹಾಗೂ ಗುರುವಾರ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು, ಮಾ.6 ರಂದು ಸರ್ಕಾರ ಉತ್ತರ ನೀಡಲಿದೆ.
ಅಧಿವೇಶನದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಧೇಯಕ ಮಂಡಿಸಿ ಉಭಯ ಸದನಗಳ ಒಪ್ಪಿಗೆ ಪಡೆಯಬಹುದು.

ಬೆಂಗಳೂರು ಅರಮನೆ ಮೈದಾನದ ಭೂ ಸ್ವಾಧೀನ ಕುರಿತ ಸುಗ್ರೀವಾಜ್ಞೆ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವು ದರಿಂದ ಈ ಸುಗ್ರೀವಾಜ್ಞೆ ಬಗ್ಗೆ ಅಧಿವೇಶನ ದಲ್ಲಿ ಯಾವ ನಿರ್ಧಾರ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.
ಮಾ. 21ರವರೆಗೆ ನಡೆಯುವ ಅಧಿ ವೇಶನದ ಉದ್ದಕ್ಕೂ ಬಸ್, ಮೆಟ್ರೋ ಪ್ರಯಾಣ ದರ ಏರಿಕೆ, ವಿದ್ಯುತ್, ನೀರು, ಹಾಲಿನ ದರ ಏರಿಕೆ ಪ್ರಸ್ತಾಪ ಸೇರಿ ಮೈಕ್ರೋ ಫೈನಾನ್ಸ್ ಕಿರುಕುಳ, ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ, ಅಭಿವೃದ್ಧಿ ಕಾಮಗಾರಿ ಗಳಿಗೆ ಅನುದಾನ ಕೊರತೆ, ಕೆಪಿಎಸ್ಸಿ ಹಗರಣ, ರಾಜ್ಯಪಾಲ-ಸರ್ಕಾರದ ನಡುವಿನ ಜಟಾಪಟಿ, ಬೆಂಗಳೂರು ನಗರದ ಸಮಸ್ಯೆಗಳನ್ನು ಮುಖ್ಯ ಅಸ್ತವಾಗಿಟ್ಟು ಕೊಂಡು ಸರ್ಕಾರದ ಮೇಲೆ ಮುಗಿ ಬೀಳಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸಜ್ಜಾಗಿದ್ದು, ಉಭಯ ಸದನಗಳಲ್ಲಿ ತೀವ್ರ ಚರ್ಚೆ, ವಾಗ್ವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.
ಇದಕ್ಕೆ ಪ್ರತಿಯಾಗಿ ನ್ಯಾ.ಕುನ್ಹಾ ವರದಿ, ಹೆಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣ, ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಅಂಗೀಕಾರ ನೀಡಲು ಸಂದಿಸದ ಕೇಂದ್ರಸರ್ಕಾರದ ಧೋರಣೆ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮಾಡಿ ರುವ ಅನ್ಯಾಯ, ತೆರಿಗೆ ಪಾಲು ಕಡಿತ ಮತ್ತಿತರ ಅಂಕಿ-ಅಂಶಗಳನ್ನು ಮುಂದಿಟ್ಟು ಕೊಂಡು ಪ್ರತಿಪಕ್ಷಗಳ ವಿರುದ್ಧ ಹರಿಹಾ ಯಲು ಕಾಂಗ್ರೆಸ್ ಕೂಡ ಸಿದ್ಧವಾಗಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು