ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸಿದೆ. ಇದೀಗ ಅವರಿಗೆ ಜೀವಾವಧಿ ಶಿಕ್ಷೆ, ಇದರ ಕತೆಗೆ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಪ್ರಮುಖ ಆರೋಪಿಯಾಗಿರುವ ಇವರಿಗೆ ನ್ಯಾಯಾಲವೂ ಬುದ್ಧವಾರ (ಏ.15) ಅಪರಾಧಿ ಎಂದು ಘೋಷಣೆ ಮಾಡಿತ್ತು. ಇದೀಗ ಪ್ರಕಟ ಮಾಡಿದೆ. ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ.

ಇದೊಂದು ಕರ್ನಾಟಕ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲವನ್ನು ಮೂಡಿಸಿದೆ. ಇದೀಗ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರು ಶಾಸಕ ಸ್ಥಾನದಿಂದ ವಜಾ ಕೂಡ ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿತ್ತು.ಇನ್ನು ಉಳಿದಂತೆ ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್​​ ಅವರನ್ನು ದೋಷಿಗಳು ಎಂದು ಹೇಳಿ, ಶಿಕ್ಷೆಯನ್ನು ನೀಡಿದೆ.

 

 

ಇನ್ನು ಪ್ರಕರಣದ ಹಿನ್ನಲೆಗಳೇನು?
2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಈ ಕೊಲೆ ಆಸ್ತಿ ವಿವಾದದ ವಿಚಾರಕ್ಕಾಗಿ ನಡೆದಿದೆ ಎಂದು ಹೇಳಲಾಗಿದೆ.ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದ್ರೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಅಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು. ಈ ಕೊಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕೈವಾಡವಿರುವ ಅನುಮಾನ ವ್ಯಕ್ತವಾಗಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದರ ನಂತರ ವಿನಯ್‌ ಕುಲಕರ್ಣಿ ಜಾಮೀನು ಪಡೆದು ಹೊರಗೆ ಬಂದಿದ್ದರು. ನಂತರದಲ್ಲಿ ಈ ಪ್ರಕರಣವನ್ನು ಜನಪ್ರತಿನಿಧಿ ಕೋರ್ಟ್​​ಗೆ ನೀಡಲಾಗಿತ್ತು, ಇದೀಗ ಅವರಿಗೆ ಶಿಕ್ಷೆಯನ್ನು ಘೋಷಣೆ ಮಾಡಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!