ಶ್ರೇಯಸ್ ಅಯ್ಯರ್ ಹೆಸರಿಗೆ ಮತ್ತೊಂದು ಐಪಿಎಲ್ ದಾಖಲೆ ….

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ 8 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಮೂಲಕ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ಆಡಲು ಸಜ್ಜಾಗಿ ನಿಂತಿದೆ.ಈ ಬಾರಿ ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿದಿರುವ ಪಂಜಾಬ್ ಕಿಂಗ್ಸ್ ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನವೇ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ.ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್​ಗೇರಿಸಿದ ಮೊದಲ ನಾಯಕ ಎಂಬ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಐಪಿಎಲ್​ನಲ್ಲಿ ಶ್ರೇಯಸ್ ಅಯ್ಯರ್ ಈವರೆಗೆ ಮೂರು ತಂಡಗಳನ್ನು ಮುನ್ನಡೆಸಿದ್ದಾರೆ. ಈ ಮೂರು ತಂಡಗಳು ಕೂಡ ಪ್ಲೇಆಫ್​ಗೆ ಪ್ರವೇಶಿಸಿದೆ ಎಂಬುದೇ ವಿಶೇಷ.

2019 ಮತ್ತು 2020 ರಲ್ಲಿ ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಡೆಲ್ಲಿ ಪಡೆ ಪ್ಲೇಆಫ್​ಗೇರಿತ್ತು. ಅದರಲ್ಲೂ 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್​ಗೇರಿಸುವಲ್ಲಿ ಶ್ರೇಯಸ್ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್, ಕೆಕೆಆರ್​ ಪಡೆಗೆ 10 ವರ್ಷಗಳ ಬಳಿಕ ಟ್ರೋಫಿ ಗೆದ್ದು ಕೊಡುವಲ್ಲಿ ಯಶಸ್ವಿಯಾದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್​​ ತಂಡಕ್ಕೆ ಟ್ರೋಫಿ ಗೆದ್ದುಕೊಟ್ಟ 2ನೇ ಕ್ಯಾಪ್ಟನ್ ಎನಿಸಿಕೊಂಡರು.

ಇದೀಗ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ ಚೊಚ್ಚಲ ಸೀಸನ್​ನಲ್ಲೇ ಪಂಜಾಬ್ ಪಡೆಯನ್ನು ಪ್ಲೇಆಫ್​ಗೆ ತಲುಪಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್​ಗೇರಿಸಿದ ಏಕೈಕ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಹೊರಹೊಮ್ಮಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!