ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ : ಸಿಎಂ ಸಿದ್ದರಾಮಯ್ಯ ಆಕ್ರೋಶ.

ಬೆಂಗಳೂರು: ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸೇತುವೆ ಉದ್ಘಾಟನೆಗೆ ಬೇರೆ ಸಮಯ ನಿಗದ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಂದು ಆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದಿಂದ ಯಾರು ಕೂಡಾ ಭಾಗಿಯಾಗುತ್ತಿಲ್ಲ. ನಾನೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಫೋನ್ ಮಾಡಿ ಬೇರೆ ದಿನ ನಿಗದಿ ಮಾಡುವಂತೆ ಕೇಳಿಕೊಂಡಿದ್ದೆ. ಬಳಿಕ ಪತ್ರವನ್ನು ಬರೆದಿದ್ದೆ. ಅದಕ್ಕೆ ಗಡ್ಕರಿ ಅವರು ಕಾರ್ಯಕ್ರಮ ಮುಂದಕ್ಕೆ ಹಾಕೋದಾಗಿ ಹೇಳಿದರು. ಆದರೆ ಇಲ್ಲಿನ ಬಿಜೆಪಿ ನಾಯಕರು ಅವರಿಗೆ ಒತ್ತಡ ಹಾಕಿರಬಹುದು ಅನ್ನಿಸುತ್ತೆ. ಅವರು ನನಗೆ ಏನು ಹೇಳದೇ ಮಾಡುತ್ತಿದೆ ಎಂದು ಕಿಡಿಕಾರಿದರು.

ನಾನು ಮೊದಲೇ ನಿಗದಿಯಾಗಿರುವ ಇಂಡಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಪ್ರತಿಭಟನಾರ್ಥವಾಗಿ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಯಾರು ಹೋಗುತ್ತಿಲ್ಲ. ಲೋಕೋಪಯೋಗಿ ಸಚಿವರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಸಾಗರ ಶಾಸಕರು ಹೋಗ್ತಿಲ್ಲ.ಕೇಂದ್ರ ಸರ್ಕಾರದವರು ಕರೆಯಬೇಕಿತ್ತು. ಸರ್ಕಾರಗಳ ನಡುವೆ ಹೀಗೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಶಿಷ್ಟಾಚಾರ ಪಾಲನೆ ಮಾಡದೇ ಉಲ್ಲಂಘನೆ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ಈ ಕಾರ್ಯಕ್ರಮ ನಮ್ಮ ರಾಜ್ಯದಲ್ಲಿ ನಡೆಯುತ್ತಿದ್ದು ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಇದ್ದೇವೆ. ಅನೇಕ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರ 75% ಹಣ ಕೊಟ್ಟರೂ ಎಲ್ಲಾ ಕಾರ್ಯಕ್ರಮಕ್ಕೆ ಕೇಂದ್ರದವರನ್ನ ಕರೆಯುತ್ತೇವೆ. ರೈಲ್ವೇಯಲ್ಲಿ ಜಾಗ, 50% ಹಣ ನಾವೇ ಕೊಡುತ್ತೇವೆ. ಕೇಂದ್ರ ಸರ್ಕಾರದವರು ಶಿಷ್ಟಾಚಾರದ ಪ್ರಕಾರ ನನ್ನನ್ನ, ಇಲಾಖೆ ಮಂತ್ರಿ, ಉಸ್ತುವಾರಿ ಮಂತ್ರಿ, ಶಾಸಕರನ್ನ ಕರೆಯಬೇಕಿತ್ತು. ಆದರೆ ಯಾರನ್ನು ಕರೆದಿಲ್ಲ ಎಂದು ಸಿಟ್ಟು ಹೊರಹಾಕಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು