ಹಸುವಿನ ತಲೆ ಕ*ದು ದೇಹ ಕೊಂಡೊಯ್ದ ದುರುಳರು : ಕರ್ನಾಟದಲ್ಲಿ ಮತ್ತೊಂದು ಅಮಾನವೀಯ ಘಟನೆ.

ಕಾರವಾರ : ಕರ್ನಾಟಕದಲ್ಲಿ ಹಸುಗಳ ಮೇಲೆ ಕ್ರೌರ್ಯ ಮರೆಯುತ್ತಿರುವ ಪ್ರಕರಣಗಳು ಹೆಚ್ವುತ್ತಲೇ ಇವೆ. ಮೊನ್ನೆ ಅಷ್ಟೇ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಆಗಂತುಕರು ಹಾಲು ತುಂಬಿದ ಮೂರು ಹಸುಗಳ ಕೆಚ್ಚಲು ಕೊಯ್ಯುವ ಮೂಲಕ ಅಟ್ಟಹಾಸ ಮೆರೆದಿದ್ದರು. ಇದರ ಬೆನ್ನಲ್ಲೇ ಮೈಸೂರಿನಲ್ಲೂ ಸಹ ಮಚ್ಚಿನಿಂದ ಹಸುವಿನ ಬಾಲಕ್ಕೆ ಹಾನಿಗೊಳಿಸಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ದೇಹ ಕೊಂಡೊಯ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲ್ಕೋಡು ಗ್ರಾಮದಲ್ಲಿ ಕೃಷ್ಣ ಆಚಾರಿ ಎಂಬುವವರಿಗೆ ಸೇರಿದ ಹಸುವಿನ ತಲೆ ಕಡಿದು ಬಳಿಕ ಅದರ ದೇಹವನ್ನು ಕೊಂಡೊಯ್ದಿದ್ದಾರೆ. ನಿನ್ನೆ (ಜನವರಿ 18) ಮನೆಯಿಂದ ಮೇಯಲು ಹೋಗಿದ್ದ ಹಸು ರಾತ್ರಿಯಾದರೂ ಸಹ ವಾಪಸ್ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಜನವರಿ 19) ಬೆಳಿಗ್ಗೆ ಮಾಲೀಕ ಕೃಷ್ಣ ಆಚಾರಿ ಅವರು ಹಸುವಿಗಾಗಿ ಹುಡಕಾಟ ನಡೆಸಿದ್ದಾರೆ. ಆ ವೇಳೆ ಹಸುವಿನ ರಕ್ತ, ಕಾಲು ಹಾಗೂ ರುಂಡ ಪತ್ತೆಯಾಗಿದೆ. ಇದನ್ನು ನೋಡಿ ಹಸುವಿನ ಮಾಲೀಕ ಕೃಷ್ಣ ಆಚಾರಿ ಬೆಚ್ಚಿಬಿದ್ದಿದ್ದಾರೆ.
ದುರುಳದು ಹಸುವಿನ ರುಂಡ ಬೇರ್ಪಡಿಸಿ, ಕಾಲು ಕತ್ತರಿಸಿ ದೇಹವನ್ನು ಮಾತ್ರ ತೆಗೆದುಕೊಂಡು ಹೋಗಿದ್ದಾರೆ. ಭಕ್ಷಣೆಗಾಗಿ ಹಸುವಿನ ದೇಹವನ್ನು ಮಾತ್ರ ಕೊಂಡೊಯ್ದಿರುವ ಶಂಕೆ ವ್ಯಕ್ತವಾಗಿದೆ. ಕಾಡು ಪ್ರಾಣಿ ದಾಳಿ ಮಾಡಿದ್ರೆ ಹಸುವಿನ ದೇಹದ ಭಾಗಗಳು ಪ್ರತ್ಯೇಕವಾಗಿ ತುಂಡು ತುಂಡಾಗಿ ಬಿಳುವುದಿಲ್ಲ. ಇದು ಮಾಂಸ ಭಕ್ಷಣೆಗೆಂದೇ ಮಾಡಿದ ಹೇಯ ಕೃತ್ಯ ಎಂದು ಸ್ಥಳೀಯರು ಆರೋಪಿಸಿದ್ದು, ಗರ್ಭ ಧರಿಸಿದ್ದ ಹಸುವನ್ನು ಕಳೆದುಕೊಂಡು ಮಾಲೀಕ ಕೃಷ್ಣ ಆಚಾರಿ ಆಘಾತಕ್ಕೊಳಗಾಗಿದ್ದಾರೆ.
ಮೊನ್ನೆ ಅಷ್ಟೇ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುವಿನ ಜೆಚ್ಚಲು ಕೊಯ್ದು ಅಟ್ಟಹಾಸ ಮರೆದಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಪ್ರತಿಭಟನೆ ಮಾಡಿದ್ದವು. ಬಳಿಕ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!