ಹೈದರಾಬಾದ್ ಮೆಟ್ರೋದಲ್ಲಿ ಹೃದಯ ರವಾನೆ, ಕನ್ನಡಿಗ ವೈದ್ಯನ ನೇತೃತ್ವ.

ಹೈದರಾಬಾದ್ :- ಹೃದಯವನ್ನು ಏರ್ಲಿಫ್ಟ್ ಮಾಡಿರುವುದು ಕೇಳಿದ್ದೇವೆ, ಆ್ಯಂಬ್ಯುಲೆನ್ಸ್ನಲ್ಲಿ ರವಾನೆ ಮಾಡಿದ್ದು ನೋಡಿದ್ದೇವೆ ಆದರೆ ಮೊದಲ ಬಾರಿಗೆ ಮೆಟ್ರೋದಲ್ಲಿ ಹೃದಯ ರವಾನೆ ಮಾಡಿ ರೋಗಿಯ ಜೀವವನ್ನು ಉಳಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕರ್ನಾಟಕದ ಧಾರವಾಡ ಮೂಲದ ವೈದ್ಯರ ಅಜಯ್ ಎಂಬುವವರು ಇದರ ನೇತೃತ್ವವಹಿಸಿದ್ದರು. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ರೋಗಿಯ ಹೃದಯವನ್ನು ಮತ್ತೊಬ್ಬರಿಗೆ ಕಸಿ ಮಾಡಲಾಗಿದೆ.
ಹೈದರಾಬಾದ್ ಮೆಟ್ರೋದಲ್ಲಿ ದಾನಿಯ ಹೃದಯ ರವಾನೆ ಮಾಡಲಾಗಿದೆ. ಕೇವಲ 13 ನಿಮಿಷಗಳಲ್ಲಿ 13 ಕಿ.ಮೀ ದೂರವನ್ನು ಕ್ರಮಿಸುವ ರೀತಿಯಲ್ಲಿ ಹಸಿರು ಕಾರಿಡಾರ್ ವ್ಯವಸ್ಥೆ ಮಾಡಲಾಗಿತ್ತು. ಈ ಸಂಪೂರ್ಣ ಜವಾಬ್ದಾರಿಯನ್ನು ಕನ್ನಡಿಗ ವೈದ್ಯರೊಬ್ಬರು ಹೊತ್ತುಕೊಂಡಿದ್ದರು.
ಜನವರಿ 17 ರಂದು ಸಂಜೆ ಕಾರಿಡಾರ್ ಅನ್ನು ರಚಿಸಲಾಗಿದ್ದು, ಎಲ್ಬಿ ನಗರದ ಕಾಮಿನೇನಿ ಆಸ್ಪತ್ರೆಯಿಂದ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಗೆ ದಾನಿಗಳ ಹೃದಯವನ್ನು ಸಾಗಿಸಲು ಅನುಕೂಲವಾಯಿತು, ಈ ಜೀವ ಉಳಿಸುವ ಕಾರ್ಯಾಚರಣೆಯಲ್ಲಿ ನಿರ್ಣಾಯಕ ಸಮಯವನ್ನು ಉಳಿಸಲಾಗಿದೆ ಎಂದು ಹೈದರಾಬಾದ್ ಮೆಟ್ರೋ ರೈಲಿನ ಪ್ರಕಟಣೆ ತಿಳಿಸಿದೆ.
ಧಾರವಾಡ ಮೂಲದ ವೈದ್ಯ ಅಜಯ್ ಎಂಬುವವರು ಹೃದಯ ಸಾಗಿಸುವ ಕಾರ್ಯಾಚರಣೆಯ ಪ್ರಮುಖ ಭಾಗವಾಗಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ 35 ವರ್ಷದ ವ್ಯಕ್ತಿಯ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ ಅಂಗಾಂಗ ದಾನಕ್ಕೆ ಕುಟುಂಬ ಮುಂದಾಗಿತ್ತು. ಈ ವೇಳೆ ಗ್ಲೆನ್ ಗೆಲ್ಸ್ ಗ್ಲೋಬಲ್ ಆಸ್ಪತ್ರೆಯ ರೋಗಿಯೊಬ್ಬರಿಗೆ ಹೃದಯ ಬೇಕಿತ್ತು. ಹೃದಯ ಮತ್ತು ಶ್ವಾಸಕೋಶ ಕಸಿ ತಜ್ಞರಾಗಿರೋ ಡಾ. ಅಜಯ ಜೋಶಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಅವರ ಪತ್ನಿ ಡಾ. ನಂದಿನಿ ಸಹ ಹೈದರಾಬಾದ್ ನಲ್ಲಿ ಸ್ತ್ರಿರೋಗ ತಜ್ಞೆ.
ಧಾರವಾಡ-ಹುಬ್ಬಳ್ಳಿಯಲ್ಲಿ ಶಿಕ್ಷಣ ಪೂರೈಸಿರುವ ಡಾ. ಅಜಯ್ ಬಳಿಕ ಯುಕೆಯಲ್ಲಿ ಶ್ವಾಸಕೋಶ ಮತ್ತು ಹೃದಯ ಕಸಿ ಚಿಕಿತ್ಸೆ ಕುರಿತು ಉನ್ನತ ಶಿಕ್ಷಣ ಪಡೆದಿದ್ದಾರೆ. ಹೈದರಾಬಾದ್ ನ ಗ್ಲೆನ್ ಗೆಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಹುಬ್ಬಳ್ಳಿ ನವನಗರದಲ್ಲಿ ಅವರ ಪೋಷಕರು ವಾಸವಿದ್ದಾರೆ. ಹೈದರಾಬಾದ್ ಮೆಟ್ರೋ ರೈಲು, ವೈದ್ಯಕೀಯ ತಂಡಗಳು ಮತ್ತು ಆಸ್ಪತ್ರೆಯ ಅಧಿಕಾರಿಗಳ ನಡುವಿನ ನಿಖರವಾದ ಸಮನ್ವಯದ ಮೂಲಕ ಜೀವ ಉಳಿಸುವ ಪ್ರಯತ್ನವನ್ನು ಸಾಧಿಸಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!